HomeKarnatakaವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕಡ್ಡಾಯ: ಸರ್ಕಾರ ಆದೇಶ

ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣ ಘಟಕ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.

ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ, ವಾಣಿಜ್ಯ ಕಟ್ಟಡಗಳು, ಹಾಸ್ಟೆಲ್ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಘಟಕ ಸ್ಥಾಪಿಸುವಂತೆ ಸರ್ಕಾರ ಆದೇಶ ಮಾಡಿದೆ.

ತ್ಯಾಜ್ಯ ನೀರು ಸಂಸ್ಕರಿಸಿ ಮರುಬಳಕೆಗೆ ಸಂಬಂಧಿಸಿದಂತೆ 2016ರ ಸರ್ಕಾರಿ ಅಧಿಸೂಚನೆಗೆ ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಇಲಾಖೆ ಹೊಸ ಅಂಶಗಳನ್ನು ಸೇರಿಸಿ ಈ ಆದೇಶ ಹೊರಡಿಸಿದೆ. ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 120 ಯೂನಿಟ್ ಗಿಂತ ಹೆಚ್ಚಿನ(ಫ್ಲ್ಯಾಟ್, ಮನೆ) ಅಥವಾ ಪ್ರತಿದಿನ 80 ಕಿಲೋ ಲೀಟರ್ ಗಿಂತ ಹೆಚ್ಚಿನ ತ್ಯಾಜ್ಯ ನೀಡುವ ಉತ್ಪಾದಿಸುವ ವಸತಿ ಸಮುಚ್ಚಯಗಳು, 5000 ಚ. ಮೀ. ವಿಸ್ತೀರ್ಣದ ಅಥವಾ 35 ಕಿಲೋ ಲೀಟರ್ ಗಿಂತ ಹೆಚ್ಚಿನ ತ್ಯಾಜ್ಯ ನೀರು ಉತ್ಪಾದಿಸುವ ಹೊಸ ಕಟ್ಟಡಗಳು ಹಾಗೂ ಶಿಕ್ಷಣ ಸಂಸ್ಥೆಗಳು ತ್ಯಾಜ್ಯ ನೀರು ಸಂಸ್ಕರಣ ಘಟಕ ಸ್ಥಾಪನೆ ಮಾಡುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular