HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರೋಟೇಶನ್ ಆದರದಲ್ಲಿ ಭಾನುವಾರ ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಾಗುತ್ತದೆ. ಮೊದಲಿಗೆ ಬೆಂಗಳೂರಿನಲ್ಲಿ ಈ ವ್ಯವಸ್ಥೆ ಜಾರಿಗೊಳಿಸುತ್ತಿದ್ದು, ಏಪ್ರಿಲ್ ನಿಂದ ಇತರೆ ನಗರಗಳಲ್ಲಿಯೂ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ರಾಜ್ಯದ ಜನರು ಭಾನುವಾರವೂ ಕಂದಾಯ ಇಲಾಖೆ ಸೇವೆಗಳನ್ನು ಪಡೆದುಕೊಳ್ಳಬಹುದು. ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular