HomeKarnatakaಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿಗೆ ನಟ ಶಿವಣ್ಣ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿಗೆ ನಟ ಶಿವಣ್ಣ ಪ್ರಚಾರ

ಹುಬ್ಬಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸಲು ಖುದ್ದು ನಾನೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿ, ಗೀತಾ ಶಿವರಾಜ್ ಕುಮಾರ್ ಅವರಿಗೆ ಮೊದಲಿನಿಂದಲೂ ಶಿವಮೊಗ್ಗದ ಜೊತೆ ಉತ್ತಮ ಒಡನಾಟವಿದೆ. ಅವರನ್ನು ಗೆಲ್ಲಿಸಲು ನಾನೇ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ. ರಾಜ್ಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಜೊತೆಗೆ ಪತ್ನಿ ಸ್ಪರ್ಧಿಸಿರುವ ಶಿವಮೊಗ್ಗ ಕ್ಷೇತ್ರ ಗೆಲ್ಲುವುದು ಕೂಡ ನಮ್ಮ ಪ್ರಮುಖ ಗುರಿಯಾಗಿದೆ. ಸಮಯ ನೋಡಿಕೊಂಡು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular