HomeKarnatakaರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ : 'ಶಿಕ್ಷಣ ಇಲಾಖೆ' ಮಹತ್ವದ ಆದೇಶ

ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ ನೀಡುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ: 22.01.2024 ರ ಸರ್ಕಾರದ ಪತ್ರದಲ್ಲಿ ಅನುದಾನಿತ ಪ್ರೌಢ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಿದಲ್ಲಿ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಶಾಲಾ ಮಹಿಳಾ ನೌಕರರಿಗೆ ಶಿಶುವಾಲನೆ ರಜೆ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಸದರಿ ಪತ್ರವನ್ನು ಈ ಪತ್ರದೊಂದಿಗೆ ಅನುಬಂಧಿಸಿ ಕಳುಹಿಸುತ್ತಾ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ ಕ್ರಮ ವಹಿಸಲು ಪ್ರೌಢಶಿಕ್ಷಣ ಮಂಡಳಿಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular