ಬೀಜಿಂಗ್: ಚೀನಾದ ಬೀಜಿಂಗ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಸಾನ್ಹೆ ನಗರದಲ್ಲಿ ಶಂಕಿತ ಅನಿಲ ಸ್ಫೋಟ ಸಂಭವಿಸಿದೆ.
ವಸತಿ ಸಂಕೀರ್ಣದ ನೆಲ ಮಹಡಿಯಲ್ಲಿರುವ ರೆಸ್ಟೋರೆಂಟ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ವರದಿಗಳು ಸೂಚಿಸುತ್ತವೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಸೋಶಿಯಲ್ ಮೀಡಿಯಾದಲ್ಲಿ ಸ್ಪೋಟದ ವೀಡಿಯೊಗಳು ಭಾರಿ ವೈರಲ್ ಆಗಿದೆ. ಮತ್ತೊಂದು ವೀಡಿಯೊದಲ್ಲಿ ಕಾರುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗುವುದನ್ನು ನೋಡಬಹುದಾಗಿದೆ.