ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಿ ‘ರಾಜೀವ್ ಗಾಂಧಿ’ ಅವರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಸೆಂಟ್ರಲ್ ಬಸ್ ನಿಲ್ದಾಣದ ಸಮೀಪ ನಿರ್ಮಿಸಿರುವ ಆಧುನಿಕ ಭಾರತದ ನಿರ್ಮಾತೃ, ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅನಾವರಣ, ಜಂಕ್ಷನ್ ಸಮಗ್ರ ಅಭಿವೃದ್ಧಿ ಮತ್ತು ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್ ಇಂದು ಸಂಜೆ ಲೋಕಾರ್ಪಣೆಗೊಳ್ಳಲಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಬೇಕೆಂದು ಕೋರುತ್ತೇವೆ ಎಂದು ಮನವಿ ಮಾಡಿದ್ದಾರೆ.