ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ.ಮಂಜುನಾಥ್ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಗೆ ಲೋಕಸಭಾ ಟಿಕೆಟ್ ಫಿಕ್ಸ್ ಆಗಿದ್ದು, ಡಾ.ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಇದರ ನಡುವೆ ಮಂಜುನಾಥ್ ಬಿಜೆಪಿ ಸೇರ್ಪಡೆಯಾಗುವುದು ಫಿಕ್ಸ್ ಆಗಿದೆ. ಹೌದು. ಮಾರ್ಚ್ 14ರಂದು ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಮಂಜುನಾಥ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.