ಬೆಂಗಳೂರು: ಬಿಜೆಪಿ 20 ಅಭ್ಯರ್ಥಿಗಳ ಘೋಷಣೆಯೊಂದಿಗೆ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾವೇರಿತೊಡಗಿದೆ. ಮಾರ್ಚ್ 16, 18ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಕಲಬುರಗಿ, ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಮಾರ್ಚ್ 16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಪ್ರಧಾನಿಯವರ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ.