HomeKarnatakaಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಶಿವಮೊಗ್ಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಈ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದರು. ಪುತ್ರನಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಅವರು ಕೂಡ ಕಾಂತೇಶ್ ಟಿಕೆಟ್ ಕೊಡುವಂತೆ ಹೇಳಿದ್ದರು. ಆದರೆ ಒತ್ತಾಯಪೂರ್ವಕವಾಗಿ ಅವರಿಗೆ ಟಿಕೆಟ್ ನೀಡಲಾಗಿದೆ. ಯಡಿಯೂರಪ್ಪ ಒತ್ತಾಯಪೂರ್ವಕವಾಗಿ ಬೊಮ್ಮಾಯಿಯವರಿಗೆ ಟಿಕೆಟ್ ಕೊಡಿಸಿದ್ದಾರೆ. ಯಡಿಯೂರಪ್ಪ ಪಕ್ಷದ ಕತ್ತು ಹಿಸುಕುತ್ತಿದ್ದಾರೆ. ಯಡಿಯೂರಪ್ಪ ನಡೆ ಪಕ್ಷ ನಿಷ್ಠರಿಗೆ ಅನ್ಯಾಯ ಆಗುತ್ತಿದೆ ಎಂದು ಬೆಂಬಲಿಗರು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೋರ್ ಕಮಿಟಿ ಸಭೆಯಲ್ಲಿಯೇ ಬಸವರಾಜ ಬೊಮ್ಮಾಯಿ ನಾನು ಶಾಸಕನಾಗಿದ್ದೇನೆ. ಮಾಜಿ ಸಿಎಂ ಆಗಿದ್ದೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಕಾಂತೇಶ್ ಗೆ ಟಿಕೆಟ್ ಕೊಡಿ ಎಂದು ಸಲಹೆ ನೀಡಿದ್ದರು. ಆದರೂ, ಯಡಿಯೂರಪ್ಪ ಪಟ್ಟು ಹಿಡಿದು ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ಒತ್ತಾಯಪೂರ್ವಕವಾಗಿ ಬೊಮ್ಮಾಯಿಗೆ ಟಿಕೆಟ್ ಕೊಡಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular