ಪುಣೆ : ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ, ಆವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 89 ವರ್ಷದ ಪಾಟೀಲ್ ಅವರನ್ನು ಬುಧವಾರ ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆಯಲ್ಲಿ ಸೋಂಕಿನ ಜೊತೆಗೆ ಜ್ವರ ಇತ್ತು ಎನ್ನಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಕಳೆದ ವರ್ಷ ಫೆಬ್ರವರಿಯಲ್ಲಿ ಮಾಜಿ ರಾಷ್ಟ್ರಪತಿ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ (89) ಹೃದಯಾಘಾತದಿಂದ ನಿಧನರಾಗಿದ್ದರು.