ಬೆಂಗಳೂರು : ‘ಶಕ್ತಿ ಯೋಜನೆ’ ಅಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ವಿತರಿಸಿರುವ ಶೂನ್ಯ ಟಿಕೇಟ್ಗಳ ವೆಚ್ಚದ ಮರುಪಾವತಿಗಾಗಿ ಒಟ್ಟು ರೂ.39975.00 ಲಕ್ಷಗಳನ್ನು (ಮೂವತ್ತೊಂಬತ್ತು ಸಾವಿರದ ಒಂಬೈನೂರ ಎಪ್ಪತ್ತೈದು ಲಕ್ಷ ರೂಪಾಯಿಗಳು ಮಾತ್ರ) ಹೆಚ್ಚುವರಿಯಾಗಿ ಈ ಕೆಳಕಂಡಂತೆ ಷರತ್ತುಗಳಿಗೊಳಪಟ್ಟು ನಿಗಮವಾರು ಬಿಡುಗಡೆಗೊಳಿಸಿ ಆದೇಶಿಸಿದೆ.
ಬಿಡುಗಡೆ ಮಾಡಿರುವ ಅನುದಾನವನ್ನು ನಾಲ್ಕು ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳು ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರಿಂದ ಪೇಯೀಸ್ ರಶೀದಿಗೆ ಮೇಲು ರುಜು ಪಡೆದು ರಾಜ್ಯ ಹುಜೂರು ಖಜಾನೆಯಿಂದ ಡ್ರಾ ಮಾಡಲು ಅನುಮತಿ ನೀಡಿ ಸರ್ಕಾರ ಆದೇಶಿಸಿದೆ.