‘ರಜಾಕಾರ್’ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು, ಸಿನಿಮಾ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಹೌದು, ‘ರಜಾಕರ್’ ಚಿತ್ರದ ಬಿಡುಗಡೆಗೆ ಅಡ್ಡಿಪಡಿಸಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದೆ
ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಮಾರ್ಚ್ 15 ರಂದು ತೆರೆಗೆ ಬರಲು ಸಿದ್ಧವಾಗಿದೆ.ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಜೆ.ಅನಿಲ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿದೆ.
ಚಿತ್ರವು ಮುಸ್ಲಿಂ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ತರಬಹುದು. ಎರಡೂ ಸಮುದಾಯಗಳ ನಡುವೆ ವಿಷ ಬೀಜ ಬಿತ್ತಬಹುದು. ಆದ್ದರಿಂದ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ವಾದವನ್ನು ಆಲಿಸಿದ ಪೀಠ ಚಿತ್ರಕ್ಕೆ ಎ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದೆ ಹಾಗೂ ಚಿತ್ರದ ಬಿಡುಗಡೆಗೆ ಅಡ್ಡಿಪಡಿಸಲು ತೆಲಂಗಾಣ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ರಜಾಕಾರ್ ಸಿನಿಮಾ ನಾಳೆ ಕನ್ನಡ , ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ತೆರೆ ಕಾಣಲಿದೆ.