ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಭೂತಾನ್ ಪ್ರಧಾನಿ ಡಾಶೊ ತ್ಸೆರಿಂಗ್ ಟೊಬ್ಗೆ ಅವರು ಐದು ದಿನಗಳ ಅಧಿಕೃತ ಭೇಟಿಗಾಗಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
2024 ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ಭೂತಾನ್ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.ವಿಮಾನ ನಿಲ್ದಾಣದಲ್ಲಿ ಅವರನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಚೌಬೆ ಸ್ವಾಗತಿಸಿದರು.
ಭೂತಾನ್ ಪ್ರಧಾನಿಯನ್ನು ಸ್ವಾಗತಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಅವರ ಭೇಟಿ ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.