ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸಶಸ್ತ್ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದಿಂದ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್ಸ್‍ ಪೆಕ್ಟರ್ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಿದ್ದಾರೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ http://ssc.gov.in ಮತ್ತು www.ssc.kkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 20 ರಿಂದ 25 ವರ್ಷದೊಳಗಿರಬೇಕು. ಪ.ಜಾತಿ, ಪ.ಪಂಗಡ ಮತ್ತು ಒ.ಬಿ.ಸಿ, ಇ.ಎಸ್.ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 08025502520, 0802527342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. 08192-259446 ಸಂಖ್ಯೆಗೆ ಕರೆ ಮಾಡಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read