HomeKarnataka21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ 2ನೇ ಪಟ್ಟಿ ಅಂತಿಮ: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ 2ನೇ ಪಟ್ಟಿ ಅಂತಿಮ: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: 21 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಅಂತಿಮಗೊಳ್ಳಲಿದ್ದು, ಸೋಮವಾರ ಬಿಡುಗಡೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ.

ಕಗ್ಗಂಟಾಗಿರುವ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮಗೊಳಿಸಿ ಕೇಂದ್ರೀಯ ಚುನಾವಣೆ ಸಮಿತಿಗೆ ಕಳುಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಕೇಂದ್ರೀಯ ಚುನಾವಣಾ ಸಮಿತಿ ಅನುಮೋದನೆ ನಂತರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇದೀಗ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ:

ಉಡುಪಿ –ಚಿಕ್ಕಮಗಳೂರು: ಜಯಪ್ರಕಾಶ್ ಹೆಗಡೆ

ದಕ್ಷಿಣ ಕನ್ನಡ: ಪದ್ಮರಾಜ್

ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ

ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ

ರಾಯಚೂರು: ಜಿ. ಕುಮಾರ ನಾಯಕ

ದಾವಣಗೆರೆ: ಲತಾ ಮಲ್ಲಿಕಾರ್ಜುನ

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್

ಬಾಗಲಕೋಟೆ: ಸಂಯುಕ್ತ ಪಾಟೀಲ್

ಹುಬ್ಬಳ್ಳಿ- ಧಾರವಾಡ: ವಿನೋದ್ ಅಸೂಟಿ

ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಮೃಣಾಲ್ ಹೆಬ್ಬಾಳ್ಕರ್

ಬೆಂಗಳೂರು ದಕ್ಷಿಣ: ಸೌಮ್ಯ ರೆಡ್ಡಿ

ಬೆಂಗಳೂರು ಉತ್ತರ: ಪ್ರೊ. ರಾಜೀವ್ ಗೌಡ

ಬೆಂಗಳೂರು ಸೆಂಟ್ರಲ್: ಮನ್ಸೂರ್ ಅಲಿ ಖಾನ್

ಕಲಬುರಗಿ: ರಾಧಾಕೃಷ್ಣ

ಬಳ್ಳಾರಿ: ವೆಂಕಟೇಶ ಪ್ರಸಾದ್

ಚಾಮರಾಜನಗರ: ಸುನಿಲ್ ಬೋಸ್

ಮೈಸೂರು: ಎಂ. ಲಕ್ಷ್ಮಣ್

ಕೋಲಾರ: ಕೆ.ಹೆಚ್. ಮುನಿಯಪ್ಪ/ ಡಾ. ಎಲ್. ಹನುಮಂತಯ್ಯ

ಕೊಪ್ಪಳ: ರಾಜಶೇಖರ ಹಿಟ್ನಾಳ್/ ಅಮರೇಗೌಡ ಬಯ್ಯಾಪುರ

ಬೀದರ್: ರಾಜಶೇಖರ ಪಾಟೀಲ/ ಸಾಗರ್ ಬಿ. ಖಂಡ್ರೆ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular