HomeIndiaಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ

ಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಎರಡು ದಿನ ಶವದೊಂದಿಗೆ ಕಾಲ ಕಳೆದ ಘಟನೆ ಬೆಳಕಿಗೆ ಬಂದಿದೆ.

ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ. ಮಂಗಳವಾರ ಮೈತ್ರಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಜಾಂ ಮೂಲದ ವ್ಯಕ್ತಿ ತನ್ನ ಪತ್ನಿ ಮತ್ತು ಮೂವರು ಪುತ್ರರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೊಲೆ ಮಾಡಿದ ನಂತರ ವ್ಯಕ್ತಿ ಶವವನ್ನು ಕೋಣೆಯಲ್ಲಿ ಬಚ್ಚಿಟ್ಟು ಎರಡು ದಿನಗಳ ಕಾಲ ವಾಸಿಸುತ್ತಿದ್ದ. ಗುರುವಾರ ಅವನ ಮಗನೊಬ್ಬನಿಂದ ವಿಷಯ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದ್ಯವ್ಯಸನಿ ಮಂಗಳವಾರ ಮಧ್ಯಾಹ್ನ ಕುಡಿದು ಬಂದಿದ್ದು, ಪತ್ನಿ ಅವಾಚ್ಯ ಪದಗಳಿಂದ ನಿಂದಿಸಲು ಆರಂಭಿಸಿದ್ದಾಳೆ. ಆಕೆಯ ವರ್ತನೆಯಿಂದ ಕೋಪಗೊಂಡ ವ್ಯಕ್ತಿ ಮರದ ಹಲಗೆಯಿಂದ ಅವಳನ್ನು ಹೊಡೆದು ಕೊಂದಿದ್ದಾನೆ. ಶವವನ್ನು ಕೋಣೆಯೊಂದರಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದಾನೆ. ಗುರುವಾರ 19 ವರ್ಷದ ಹಿರಿಯ ಪುತ್ರ ಗಂಜಾಂನಲ್ಲಿರುವ ತಮ್ಮ ಸ್ಥಳೀಯ ಸ್ಥಳದಿಂದ ಮನೆಗೆ ಹಿಂತಿರುಗಿ ಶವ ಪತ್ತೆ ಮಾಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular