HomeKarnatakaBIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ.

ಹೊಳೆನರಸಿಪುರದ ದೇವರಾಜು (43), ಮಂಜುಳಾ (36) ಮೃತರು. ಕೆ.ಹೊಸಕೊಪ್ಪಲಿನಲ್ಲಿ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮನೆ ಬೀಗ ಒಡೆದು ಒಳೆಗೆ ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತಿ ದೇವರಾಜು ಶವ ಪತ್ತೆಯಾಗಿದ್ದು, ಮಂಚದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತ್ನಿ ಮಂಜುಳಾ ಶವ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular