HomeKarnatakaಲೋಕಸಭಾ ಚುನಾವಣೆ: ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ; ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ ಎಂದ ಡಿಸಿಎಂ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ; ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ ಎಂದ ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಚುನಾವಣೆ ಸಮಿತಿ (ಸಿಇಸಿ) ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿದ್ದಾರೆ. ಅವರು ವೈದ್ಯರಿಂದ ಸಮಯ ಪಡೆದಿದ್ದ ಕಾರಣ ಇಲ್ಲಿಗೆ ಆಗಮಿಸಿದ್ದಾರೆ. ಹಾಗಾಗಿ ಸಭೆ ಮುಂದೂದಲಾಗಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇದೇ ವೇಳೆ ಬಿಜೆಪಿಯಲ್ಲಿನ ಟಿಕೆಟ್ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಬಿಜೆಪಿ ಪಕ್ಷದ ಟಿಕೆಟ್ ವಿಚಾರವನ್ನು ಅವರ ಪಕ್ಷದವರು ನೋಡಿಕೊಳ್ಳುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular