ಪ್ರಸಿದ್ಧ್ ನಿರ್ದೇಶನದ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’ ಚಿತ್ರ ಇದೇ ಏಪ್ರಿಲ್ 5ಕ್ಕೆ ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಚಿತ್ರ ತಂಡ ಇಂದು ಸಂಜೆ 6 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಪ್ರಸಿದ್ಧ್ ಸಿನಿಮಾಸ್ ಕ್ಯಾಂಪ್ ಬ್ಯಾನರ್ ನಡಿ ಪ್ರಸಿದ್ಧ್, ಮದನ್ ಗೌಡ ಮತ್ತು ಅನಿಲ್ ಕುಮಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿರಣ್ ರಾಜ್ ಮತ್ತು ಯಶ ಶಿವಕುಮಾರ್ ಪ್ರಮುಖ ಪಾತ್ರದಲ್ಲಿದ್ದು, ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ ನೀಡಿದ್ದಾರೆ. ವೆಂಕಿ ಸಂಕಲನ, ಕಿಟ್ಟಿ ಕೌಶಿಕ್ ಛಾಯಾಗ್ರಹಣವಿದೆ. ಮಳವಳ್ಳಿ ಸಾಯಿ ಕೃಷ್ಣ ಸಂಭಾಷಣೆ ಬರೆದಿದ್ದಾರೆ.