ಬೆಂಗಳೂರು : ಕಾಂಗ್ರೆಸ್ ಕರ್ನಾಟಕದಲ್ಲಿ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಂತೆಯೇ ದೇಶದ ಮಹಿಳೆಯರಿಗಾಗಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ 5 ಹೊಸ ಪಂಚ ಗ್ಯಾರಂಟಿ ಯೋಜನೆ ಘೋಷಿಸಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ 5 ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
1) ಮಹಾಲಕ್ಷ್ಮಿ ಯೋಜನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ದೇಶದ ಬಡಕುಟುಂಬಗಳ ಯಜಮಾನಿಯರಿಗೆ ತಲಾ ರೂ.1 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಇದಕ್ಕೆ ನಮ್ಮ ಸರ್ಕಾರದ ಸಾಧನೆಗಳು ಸಾಕ್ಷಿ. ಕಾಂಗ್ರೆಸ್ ಗ್ಯಾರಂಟಿ – ಇವು ಭರವಸೆಯಲ್ಲ, ಬದ್ಧತೆ” ಎಂದಿದ್ದಾರೆ.
2) ಆದಿ ಅಬಾದಿ ಪೂರಾ ಹಕ್ ಯೋಜನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 50 ಮೀಸಲಾತಿ ಒದಗಿಸಿ, ಸಾಮಾಜಿಕ ಮತ್ತು ಆರ್ಥಿಕ ಬಲ ತುಂಬಲಾಗುವುದು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಇದಕ್ಕೆ ನಮ್ಮ ಸರ್ಕಾರದ ಸಾಧನೆಗಳು ಸಾಕ್ಷಿ ಎಂದು ಹೇಳಿದ್ದಾರೆ.
3) ಶಕ್ತಿ ಕಾ ಸಮ್ಮಾನ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರ ವೇತನವನ್ನು ದ್ವಿಗುಣಗೊಳಿಸಲಾಗುವುದು ಎಂದಿದ್ದಾರೆ.
4) ಅಧಿಕಾರ ಮೈತ್ರಿ ಯೋಜನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಮ್ಮ ಹಕ್ಕು ಮತ್ತು ಅಧಿಕಾರಗಳನ್ನು ಅರಿಯಲು ಅಗತ್ಯವಿರುವ ಕಾನೂನು ನೆರವು ಒದಗಿಸಲು ಪ್ರತಿ ಪಂಚಾಯತಿ ಮಟ್ಟದಲ್ಲಿ ಕಾನೂನು ಸಹಾಯಕರ ನೇಮಕ ಮಾಡಲಾಗುವುದು. ಇದರಿಂದ 2.5 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದಿದ್ದಾರೆ.
5) ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್ ಯೋಜನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಮಹಿಳಾ ಹಾಸ್ಟೆಲ್ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.