HomeIndiaಇಂದು ಮಧ್ಯಾಹ್ನ 3 ಗಂಟೆಗೆ 'ಪ್ರಜಾಪ್ರಭುತ್ವದ ಹಬ್ಬ' ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ...

ಇಂದು ಮಧ್ಯಾಹ್ನ 3 ಗಂಟೆಗೆ ‘ಪ್ರಜಾಪ್ರಭುತ್ವದ ಹಬ್ಬ’ ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ಪ್ರಕಟಿಸಲಾಗುವುದು.

ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ. ಲೋಕಸಭೆ ಚುನಾವಣೆಯ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ ಆಗಲಿದೆ. ಮಧ್ಯಾಹ್ನ 3 ಗಂಟೆಗೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಮತ್ತಿಬ್ಬರು ನೂತನ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಪ್ರಕಟಿಸಲಿದ್ದಾರೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಸರ್ಕಾರ ಅಥವಾ ಸಚಿವರು ಅನುದಾನ ಅಥವಾ ಭರವಸೆಗಳನ್ನು ನೀಡುವಂತಿಲ್ಲ. ಶಂಕುಸ್ಥಾಪನೆ, ಉದ್ಘಾಟನೆ, ಚಾಲನೆ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಹ ನೇಮಕಾತಿ, ಪ್ರಕಟಣೆ ಹೊರಡಿಸುವಂತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular