HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734...

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ 400ಕ್ಕೂ ಅಧಿಕ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿ ಸೂಚನೆ ಹೊರಡಿಸಲಾಗಿದೆ.

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿವಿಗಳಿಂದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏಪ್ರಿಲ್ 15 ರಿಂದ ಮೇ 15ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜಲಸಂಪನ್ಮೂಲ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 400ಕ್ಕೂ ಅಧಿಕ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಏಪ್ರಿಲ್ 29 ರಿಂದ ಮೇ 28 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗಮನಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular