HomeKarnatakaBIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ.

ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಹಾಗೂ ಗದಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಚ್ಚುನಾಯಿಯನ್ನು ಹಿಡಿಯುವಂತೆ ಪುರಸಭೆ ಅಧಿಕಾರಿಗಳಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಲಕ್ಷ್ಮೀಶ್ವರ ಪಟ್ಟಣದ ಹುಚ್ಚು ನಾಯಿ ಹಾವಳಿ ಹೆಚ್ಚುತ್ತಿದ್ದರೂ ಪುರಸಭೆ ಅಧಿಕರಿಗಳು ಮಾತ್ರ ನಿರ್ಲಕ್ಷವಹಿಸಿದ್ದಾರೆ. ಇದರಿಂದಾಗಿ ಈಗ ಹುಚ್ಚು ನಾಯಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಆತಂಕ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular