ಬೆಂಗಳೂರು : ತೆರಿಗೆ ಪಾವತಿ ಬಾಕಿ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಟಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿಯಲಾಗಿದೆ.
ಹೌದು, ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆಯೇ ಮಂತ್ರಿ ಮಾಲ್ ಗೆ ಬೀಗ ಜಡಿದಿದ್ದಾರೆ ಎಂದು ತಿಳಿದು ಬಂದಿದೆ.
ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ ಯೂ ಕೂಡ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.