ನವದೆಹಲಿ : ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾದ ಉಂಟಾದ ಹಿನ್ನೆಲೆ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ನಿನ್ನೆ ಸಂಜೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಮಿತಾಭ್ ಬಚ್ಚನ್ ಕಾಲಿನ ರಕ್ತನಾಳದ ಸಮಸ್ಯೆ ಉಂಟಾದ ಹಿನ್ನೆಲೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ . ಬಳಿಕ ಸಂಜೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.ಎಂದು ಹೇಳಲಾಗಿತ್ತು. ಆದರೆ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದ ವದಂತಿಗಳನ್ನು ಸುಳ್ಳು ಮಾಹಿತಿ ಎಂದು ನಿರಾಕರಿಸಿದರು.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅಮಿತಾಭ್ ಬಚ್ಚನ್ ಥಾಣೆಯ ದಾದೋಜಿ ಕೊಂಡದೇವ್ ಸ್ಟೇಡಿಯಂನಿಂದ ನಟ ನಿರ್ಗಮಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಝಿ ಮುಂಬೈ ಮತ್ತು ಟೈಗರ್ಸ್ ಆಫ್ ಕೋಲ್ಕತ್ತಾ ನಡುವೆ ಪಂದ್ಯ ವೀಕ್ಷಿಸಿ ತೆರಳಿದ್ದಾರೆ.‘ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ಶಸ್ತ್ರಚಿಕಿತ್ಸೆಯ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದರು.