HomeKarnatakaBIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

BIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿವಿರುದ್ಧ ಮಹಿಳಾ ಭದ್ರತಾ ಸಿಬ್ಬಂದಿಗಳು ದೂರು ದಾಖಲಿಸಿದ್ದಾರೆ.

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅಧಿಕಾರಿ ಗಜೇಂದ್ರ ಪಿ. ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಬಳಕೆ, ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಭದ್ರತಾ ಸಿಬ್ಬಂದಿ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಸಹಕರಿಸದಿದ್ದರೆ ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಬೇಸತ್ತ ಮಹಿಳಾ ಭದ್ರತಾ ಸಿಬ್ಬದಿಗಳು ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳಾ ಭದ್ರತಾ ಸಿಬ್ಬಂದಿ ದೂರಿನ ಹಿನ್ನೆಲೆಯಲ್ಲಿ ಮೆಟ್ರೋ ಅಧಿಕಾರಿ ಗಜೇಂದ್ರ ಪಿ. ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular