alex Certify BREAKING : ‘ಸಿಎಂ ಸಿದ್ದರಾಮಯ್ಯ’ಗೆ 7 ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೀಘ್ರವೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಸಿಎಂ ಸಿದ್ದರಾಮಯ್ಯ’ಗೆ 7 ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೀಘ್ರವೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..?

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಇಂದು 7 ನೇ ವೇತನದ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ 7 ನೇ ವೇತನದ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜ್ಯ 7 ನೇ ವೇತನ ಆಯೋಗದ ವರದಿ ಸಲ್ಲಿಕೆ ಮಾಡಲಾಗುತ್ತಿದೆ. 7 ನೇ ವೇತನದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ವರದಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ 7 ನೇ ವೇತನ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದ್ದು, ಇದನ್ನು ಪರಿಶೀಲಿಸಿ ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘‘ಇಂದು 7 ನೇ ವೇತನ ಆಯೋಗದ ವರದಿ ಪಡೆದಿದ್ದೇನೆ, ಶೇ.27 ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ. ಇದನ್ನು ಆರ್ಥಿಕ ಇಲಾಖೆಯವರು ಪರಿಶೀಲನೆ ಮಾಡಲಿದ್ದಾರೆ’ ಎಂದರು.ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಇದಕ್ಕೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆಯಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...