HomeKarnatakaರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼದಲ್ಲಿ ಸಿಗಲಿದೆ...

ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼದಲ್ಲಿ ಸಿಗಲಿದೆ ಈ ಹೊಸ ಸೇವೆ!

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡಿನ ಗ್ರಾಮೀಣ ಭಾಗದ ಜನರ ಹೆಚ್ಚಿನ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಸೇವೆಗಳನ್ನು ಕಲ್ಪಿಸಲು ಮುಂದಾಗಿದೆ. ಇದೀಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭಿಸಿದ್ದು, ಜನರಿಗೆ ಮತ್ತಷ್ಟು ಅನುಕೂಲ ಆಗಲಿದೆ.

ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈಗ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular