HomeKarnatakaBIG NEWS: ದಕ್ಷಿಣ ಕನ್ನಡ ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಜಿಲ್ಲಾಧ್ಯಕ್ಷರಿಗೆ ನಿಂದನೆ, ಕಚೇರಿಗೆ ಬೆಂಕಿ ಹಚ್ಚುವುದಾಗಿ...

BIG NEWS: ದಕ್ಷಿಣ ಕನ್ನಡ ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಜಿಲ್ಲಾಧ್ಯಕ್ಷರಿಗೆ ನಿಂದನೆ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಕಟೀಲು ಟೀಂ ನಿಂದ ಬೆದರಿಕೆ ಆರೋಪ

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಸ್ಥಳೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಅವಾಚ್ಯವಾಗಿ ನಿಂದಿಸಿರುವ ಘಟನೆ ನಡೆದಿದೆ.

ಅಲ್ಲದೇ ಸಂಸದ ನಳೀನ್ ಕುಮಾರ್ ಕಟೀಲ್ ಟೀಂ ನಿಂದ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಒಡ್ಡಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅರುಣ್ ಕುಮರ್ ಪುತ್ತಿಲ ಅವರನ್ನು ಪಕ್ಷಕ್ಕೆ ಕರೆತರಲು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಇತರ ನಯಕರು ಬಿವೈ.ವಿಜಯೇಂದ್ರ ನೇತೃತ್ವದಲ್ಲಿ ಸಂಧನ ಸಭೆ ನಡೆಸಿ ಪುತ್ತಿಲ ಮನವೊಲಿಕೆಗೆ ಯತ್ನಿಸಿದ್ದಾರೆ. ಕಳೆದ ದಿನ ನಡೆದ ಸಭೆಯಲ್ಲಿ ಕುಂಪಿಲ ಅವರನ್ನೇ ಕಚೇರಿಯಲ್ಲಿ ಕೂಡಿ ಹಾಕಿ ಸ್ಥಳೀಯ ನಾಯಕರು ಹೈಡ್ರಾಮ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುತ್ತಿಲ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಪಟ್ತು ಹಿಡಿದ ಕಟೀಲು ಟಿಂ, ಮಠಂದೂರು ಟೀಂ, ಜಿಲ್ಲಾಧ್ಯಕ್ಷರಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಕಟೀಲ್ ತಂಡದಲ್ಲಿ ಗುರುತಿಸಿಕೊಂಡಿರುವ ಅಜಿತ್ ಹೊಸಮಣೆ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular