ಬೆಂಗಳೂರು : ಬೆಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಸ್ಕರಿಸಿದ ನೀರಿನ ಬಳಕೆ ಕಡ್ಡಾಯಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ನಿರಾಕ್ಷೇಪಣಾ ಪತ್ರ ಹಾಗೂ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಜಲಮಂಡಳಿ ತಿಳಿಸಿದೆ.
ಜಲಮಂಡಳಿ ಕಾಯ್ದೆಯಂತೆ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಗುಣಮಟ್ಟ ದೃಢೀಕರಣವಾಗಿರುವ ಪರಿಸರ ಸ್ನೇಹಿ ಸಂಸ್ಕರಿಸಿದ ನೀರನ್ನು ಮಾತ್ರ ಬಳಸಬೇಕೆಂದು ಆದೇಶಿಸಲಾಗಿದೆ. ಅದಕ್ಕೆ ಪೂರಕವಾಗಿ ಜಲಮಂಡಳಿ ವತಿಯಿಂದ ಪರಿಸರ ಜಲಸ್ನೇಹಿ ವೆಬ್ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಸಂಸ್ಕರಿಸಿದ ನೀರನ್ನು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ಜಲಮಂಡಳಿ ಸಾರ್ವಜನಿಕರಿಗೆ ತಿಳಿಸಿದೆ. ಹಾಗೂ 1916 ಗೆ ಕರೆ ಮಾಡುವ ಮೂಲಕ ಸಾರ್ವಜನಿಕರು ನೀರಿನ ದುರ್ಬಳಕೆ ತಡೆಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.