HomeKarnatakaBIG NEWS: ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಕೆ.ಎಸ್.ಈಶ್ವರಪ್ಪ ಘೋಷಣೆ

BIG NEWS: ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಕೆ.ಎಸ್.ಈಶ್ವರಪ್ಪ ಘೋಷಣೆ

ಶಿವಮೊಗ್ಗ: ಕಾಂತೇಶ್ ಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಕ್ಕಳ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ತಂದೆ-ಮಕ್ಕಳ ಕೈಗೆ ಪಕ್ಷ ಸಿಲುಕಿ ಕಾರ್ಯಕರ್ತರು ಪರದಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಸ್ವರಪ್ಪ, ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ನನ್ನ ಹೋರಾಟ. ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನನಗೆ ಚುನಾವಣೆಗೆ ಸ್ಪರ್ಧಿಸಲು ಮೊದಲಿನಿಂದಲು ಒತ್ತಡವಿತ್ತು. ರಾಜ್ಯ ಬಿಜೆಪಿ ಬಿಎಸ್ ವೈ ಹಾಗೂ ಅವರ ಕುಟುಂಬದ ಮುಷ್ಠಿಯಲ್ಲಿ ಸಿಲುಕಿದೆ ಎಂದು ಗುಡುಗಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಶ್ವರಪ್ಪ ಇದೇ ವೇಳೆ ಘೋಷಿಸಿದ್ದಾರೆ. ಪಕ್ಷವನ್ನು ಉಳಿಸಲು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ. ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular