ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದು, ಇಂದಿನಿಂದ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ.
ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಾಗರಕರ್ನೂಲ್ ನಿಂದ ಕಲಬುರಗಿಗೆ ಪ್ರಧಾನಿ ಮೋದಿ ಬಂದಿಳಿದಿದ್ದಾರೆ. ನಂತರ ಡಿಎಆರ್ ಗ್ರೌಂಡ್ ನಿಂದ ಎನ್ ವಿ ಕಾಲೇಜುವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ನಂತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ .
ಸಮಾವೇಶದ ಮೈದಾನದಲ್ಲಿ ಜನರು ಕಿಕ್ಕಿರಿದು ಸೇರಿದ್ದಾರೆ. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಘೋಷಣೆ ಮೊಳಗುತ್ತಿದೆ.
ರಾಜ್ಯದಲ್ಲಿ ಮೋದಿ ಚುನಾವಣಾ ರಣಕಹಳೆ
ಮಾರ್ಚ್ 16, 18ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಕಲಬುರಗಿ, ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ 16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ಫ್ಲೈಟ್ನಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15 ಮತ್ತು 19 ರ ನಡುವೆ ಕೋಲಾರ, ಶಿವಮೊಗ್ಗ, ಬೀದರ್ ಮತ್ತು ಧಾರವಾಡದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಪ್ರಧಾನಿಯವರು ಇದೇ ಅವಧಿಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಇತರ ರ್ಯಾಲಿಗಳನ್ನು ಕೂಡ ನಡೆಸಲಿದ್ದಾರೆ. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವು ನಾಯಕರು ಕೂಡ ಆಗಮಿಸಲಿದ್ದಾರೆ.