HomeKarnatakaBREAKING : ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರಗಳು ; ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

BREAKING : ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರಗಳು ; ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಕಲಬುರಗಿ : ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಎನ್ ವಿ ಗ್ರೌಂಡ್ನಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.

ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪೇಠ ತೊಡಿಸಿದರು. ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿಗೆ ಕಂಬಳಿ ಶಾಲು ಹಾಕಿದರು. ಭಗವಂತ ಖೂಬಾ ಮತ್ತು ಸಂಸದ ಉಮೇಶ್ ಜಾಧವ್ ಅವರು ಮೋದಿ ಅವರಿಗೆ ಹಾರ ಹಾಕಿ ಸನ್ಮಾನಿಸಿದರು.

ತೆಲಂಗಾಣದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಿದ್ದು, ಕನ್ನಡಿಗರು ಜೈ ಶ್ರೀ ರಾಮ್..ನಮೋ ನಮೋ ಎಂದು ಘೋಷಣೆಗಳನ್ನು ಕೂಗಿ ಸ್ವಾಗತ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular