ಕಲಬುರ್ಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆ ಇಲ್ಲದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಕಲಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಚುನಾವಣೆಗೂ ಮೊದಲೇ ದೊಡ್ಡ ದೊಡ್ಡ ಭರವಸೆಗಳನ್ನು ಕೊಟ್ಟರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿದರು. ಎಲ್ಲವೂ ಉಚಿತ ಎಂದರು. ಆದರೆ ಈಗ ಯಾವುದನ್ನು ಸಮರ್ಪಕವಾಗಿ ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರದ ಬಳಿ ಹಣವೇ ಇಲ್ಲ. ಸರ್ಕಾರ ಲೂಟಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು.
ಗರೀಬಿ ಹಠಾವೋ ಘೋಷಣೆಯನ್ನು ಕಾಂಗ್ರೆಸ್ ನೀಡಿದ್ದು ಬಡವರ ಜೀವನದಲ್ಲಿ ಏನಾದರೂ ಬದಲಾವಣೆಯಾಗಿದೆಯೇ? ತೆಲಂಗಾಣ ಕಾಂಗ್ರೆಸ್ ಹಾಗೂ ಬಿ ಆರ್ ಎಸ್ ನ ನೀತಿಗಳ ನಡುವೆ ವಿಭಜನೆಯಾಯಿತು. ಈ ಎರಡೂ ಪಕ್ಷಗಳು ಜನರ ಕನಸನ್ನು ಚೂರು ಚೂರು ಮಾಡಿದರು ಎಂದು ಗುಡುಗಿದರು.