ನವದೆಹಲಿ : ವೃದ್ಧರು, ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾವಣೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.
ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.