ನವದೆಹಲಿ : ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ಏಪ್ರಿಲ್ 26ರಂದು ಎರಡನೇ ಹಂತದ ಮತದಾನ
ಮೇ 7ರಂದು ಮೂರನೇ ಹಂತದ ಮತದಾನ
ಮೇ 20 ರಂದು ನಾಲ್ಕನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಜೂನ್ 1 ರಂದು ಐದನೇ ಹಂತದ ಮತದಾನ
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ