Loka Sabha Election : ಕರ್ನಾಟಕದಲ್ಲಿ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ

ಬೆಂಗಳೂರು : ಕೇಂದ್ರ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ 2 ಹಂತದ ಮತದಾನ ನಡೆಯಲಿದೆ. ಏ.26 ರಂದು ಮೊದಲ ಹಂತದ ಮತದಾನ ನಡೆಯಲಿ, ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿದೆ. ಏ.20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ

ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read