HomeIndiaಚುನಾವಣೆಯಲ್ಲಿ ಎಐ ತಂತ್ರಜ್ಞಾನ ಬಳಕೆ: ಬ್ಯಾಂಕ್, ನಗದು ವ್ಯವಹಾರ, ಯುಪಿಐ ಹಣದ ವಹಿವಾಟಿನ ಮೇಲೆ ಆಯೋಗ...

ಚುನಾವಣೆಯಲ್ಲಿ ಎಐ ತಂತ್ರಜ್ಞಾನ ಬಳಕೆ: ಬ್ಯಾಂಕ್, ನಗದು ವ್ಯವಹಾರ, ಯುಪಿಐ ಹಣದ ವಹಿವಾಟಿನ ಮೇಲೆ ಆಯೋಗ ಹದ್ದಿನ ಕಣ್ಣು

ನವದೆಹಲಿ: ಮುಕ್ತ ಮತ್ತು ಪಾರದರ್ಶಕ ಲೋಕಸಭೆ ಚುನಾವಣೆಗಾಗಿ ಚುನಾವಣಾ ಆಯೋಗದ ವತಿಯಿಂದ ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ(AI) ಬಳಸಿಕೊಳ್ಳಲಾಗುತ್ತದೆ.

ಇದಕ್ಕಾಗಿ ಗೂಗಲ್ ಜೊತೆ ಆಯೋಗ ಒಪ್ಪಂದ ಮಾಡಿಕೊಂಡಿದೆ. ಇದರೊಂದಿಗೆ ನಗದು ವ್ಯವಹಾರ ಮಾತ್ರವಲ್ಲದೆ, ಭಾರಿ ಪ್ರಮಾಣದ ಯುಪಿಐ ಹಣದ ವಹಿವಾಟು, ಬ್ಯಾಂಕ್ ವಹಿವಾಟುಗಳ ಮೇಲೆಯೂ ಚುನಾವಣಾ ಆಯೋಗ ಹದ್ದಿನ ಕಣ್ಣು ಇಡಲಿದೆ.

ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ತಪ್ಪು ಮಾಹಿತಿಗಳನ್ನು ಪತ್ತೆ ಹಚ್ಚಿ ಅದನ್ನು ತೆಗೆದು ಹಾಕುವ ಕೆಲಸವನ್ನು ಕೃತಕ ಬುದ್ಧಿಮತ್ತೆ ವಿಭಾಗ ಮಾಡಲಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣ ತೆಗೆಯುವ ಪ್ರಕ್ರಿಯೆಗೆ ಅತ್ಯಂತ ವೇಗವಾಗಿರುತ್ತದೆ. ಅಭ್ಯರ್ಥಿಗಳು ಪದೇ ಪದೇ ನಿಯಮ ಉಲ್ಲಂಘಿಸಿದಲ್ಲಿ ಅವರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಬ್ಲಾಕ್ ಮಾಡಲಾಗುವುದು. ಇತ್ತೀಚೆಗೆ ಅಭ್ಯರ್ಥಿಗಳು ನೇರವಾಗಿ ನಗದು ಹಂಚಿಕೆ ಕೈಬಿಟ್ಟು ಯುಪಿಐ ಮೂಲಕ ಮತದಾರರಿಗೆ ಹಣ ಕಳಿಸಿ ಆಮಿಷವೊಡ್ಡುವುದು ಕಂಡುಬಂದಿದೆ. ಹೀಗಾಗಿ ಭಾರಿ ಪ್ರಮಾಣದಲ್ಲಿ ಯುಪಿಐ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ವಹಿವಾಟು ನಡೆಸುವುದರ ಮೇಲೆಯೂ ಚುನಾವಣಾ ಆಯೋಗ ನಿಗಾ ವಹಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular