ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಸಭೆ ನಡೆಸಿದ್ದು, ಸದ್ಯ ಮೂರು ಕ್ಷೇತ್ರ ಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಲಾಗಿದೆ.
ಹಾಸನ, ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಜೆಡಿಎಸ್ ಅಭ್ಯರ್ಥಿ ಘೋಷಣೆಯಾಗಲಿದೆ. ಇನ್ನು ಮಂಡ್ಯದಿಂದ ನೀವೇ ಸ್ಪರ್ಧಿಸಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರಾಗಲಿದ್ದಾರೆ? ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಿದಲ್ಲಿ ಸಂಸದೆ ಸುಮಲತಾ ಮುಂದಿನ ನಿಲುವೇನಾಗಿರಬಹುದು? ಎಂಬುದು ತೀವ್ರ ಕುತೂಹಲ ಮೂಡಿಸಿದೆ.