HomeKarnatakaBIG NEWS: ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

BIG NEWS: ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಳೆದ ದಿನ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿನಿ ಇಂದು ನೇಣಿಗೆ ಕೊರಳೊಡ್ಡಿದ್ದಾಳೆ.

ಬಾಗಲಕೋಟೆ ತಾಲೂಕಿನ ಕದಂಪುರ ಗ್ರಾಮದ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮಿಶ್ರೀಕೋಟಿ, ಮುಖ್ಯಶಿಕ್ಷಕ ಕೆ.ಹೆಚ್.ಮುಜಾವರ ಹಾಗೂ ಇತರೆ ಶಿಕ್ಷಕರು ಶಾಲೆಯಲ್ಲಿ 2 ಸಾವಿರ ರೂಪಾಯಿ ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಮೇಲೆ ಸಂಶಯ ಪಟ್ಟು ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ವಿದ್ಯಾರ್ಥಿನಿಗೆ ಆಣೆ ಪ್ರಮಾಣವನ್ನು ಮಾಡಿಸಿದ್ದಾರೆ. ಇದೇ ವೇಳೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯನ್ನೂ ವಿಚಾರಿಸಿದ್ದಾರೆ. ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular