ಬೆಂಗಳೂರು : ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸರ್ಕಾರ ‘ಡಾ.ಡಿ.ಎಂ ನಂಜುಂಡಪ್ಪ ವರದಿಯ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ, ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ (comprehensive composite development index (CCDI) ವನ್ನು ಗುರುತಿಸಲು ಶ್ರೀ. ಪ್ರೋ. ಗೋವಿಂದ ರಾವ್ ಆರ್ಥಿಕ ತಜ್ಞರು ಇವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.