ರಾಘವ್ ನಾಯಕ್ ಮತ್ತು ಪ್ರಶಾಂತ್ ರಾಜ್ ಕಥೆ ಬರೆದು ನಿರ್ದೇಶಿಸಿರುವ ‘O2’ ಚಿತ್ರದ ಟೀಸರ್ ಇಂದು ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸ್ಯಾಂಡಲ್ ವುಡ್ ಮತ್ತು ಟಾಲಿವುಡ್ ನ ಬೇಡಿಕೆ ನಟಿಯಾಗಿರುವ ಆಶಿಕಾ ರಂಗನಾಥ್ ಮತ್ತು ಪ್ರವೀಣ್ ತೇಜ್ ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣ ಮಾಡಿದ್ದು, ಆಶಿಕಾ ರಂಗನಾಥ್ ಪ್ರವೀಣ್ ತೇಜ್ ಸೇರಿದಂತೆ ರಾಘವ ನಾಯಕ್, ಪ್ರಕಾಶ್ ಬೆಳವಾಡಿ, ಶ್ರೀಧರ್, ಗೋಪಾಲ್ ದೇಶ್ಪಾಂಡೆ, ಸಿರಿ ರವಿಕುಮಾರ್, ಮತ್ತು ಪುನೀತ್ ಬಿ ಎ ತೆರೆ ಹಂಚಿಕೊಂಡಿದ್ದಾರೆ. ವಿವನ್ ರಾಧಾಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ದೀಪು ಎಸ್ ಕುಮಾರ್ ಸಂಕಲನವಿದೆ.