HomeKarnatakaBIG NEWS: 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ; ಈಗ ಬುಡಸಮೇತ...

BIG NEWS: 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ; ಈಗ ಬುಡಸಮೇತ ಅವರನ್ನು ತೆಗೆಯಲು ಡಾ.ಮಂಜುನಾಥ್ ರನ್ನು ತಂದಿದ್ದೇವೆ; ಸಿ.ಪಿ.ಯೋಗೇಶ್ವರ್ ವಾಗ್ದಾಳಿ

ರಾಮನಗರ: ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಿಡಿಕಾರಿದ್ದು, ನಾನೇನಾದರೂ 5 ವರ್ಷದ ಹಿಂದೆ ಸ್ಪರ್ಧೆ ಮಾಡಿದ್ದರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ ಎಂದು ಟಾಂಗ್ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ. ಹಾಗಾಗಿ ಈ ಬಾರಿ ಅವರನ್ನು ಬುಡಸಮೇತ ತೆಗೆಯಲು ಡಾ.ಮಂಜುನಾಥ್ ಅವರನ್ನು ತಂದಿದ್ದೇವೆ ಎಂದರು.

ನಾನು ಪಾರ್ಲಿಮೆಂಟ್ ಗೆ ಹೋಗಬಾರದು ಎಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿಯೇ ಇರಬೇಕು ಎಂಬುದು ನನ್ನ ನಿಲುವು. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಬಗ್ಗೆ ಮಾತನಡಲು ಅವರಿಗೆ ಯೋಗ್ಯತೆ ಇಲ್ಲ. ಅವರಿಗೆ ಸಿ.ಎನ್.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡ್ತಿದ್ದರು? ಕಳೆದ ಬಾರಿ ಮುನಿರತ್ನ ಕಾಂಗ್ರೆಸ್ ನಲ್ಲಿದ್ದರು. ಆದರೆ ಈ ಬಾರಿ ಮುನಿರತ್ನ ಬಿಜೆಪಿಯಲ್ಲಿದ್ದಾರೆ. ಹಾಗಾಗಿ ಗೆಲುವು ನಮಗೆ ನಿಶ್ಚಿತ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular