HomeKarnatakaBIG NEWS: ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

BIG NEWS: ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ, ಮಾರ್ಚ್ 19ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ 2ನೇ ಪಟ್ಟಿ ಬಗ್ಗೆ ಚರ್ಚಿಸಲಾಗುವುದು. ಮಾರ್ಚ್ 20ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದರು.

ಇಂದು ಭಾರತ್ ಜೋಡೋ ಸಮಾರೋಪ ಸಮಾರಂಭ ಕಾರ್ಯಕ್ರಮ ಮುಂಬೈನಲ್ಲಿ ನಡೆಯುತ್ತಿದ್ದು, ಶಿವಾಜಿ ಪಾರ್ಕ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕರೆಲ್ಲರೂ ಮುಂಬೈಗೆ ತೆರಳುತ್ತಿರುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾರ್ಚ್ 21ರಂದು ಅವರ ಸಭೆ ಕರೆಯಲಾಗಿದೆ. ಗ್ಯಾರಂಟಿ ಅಧ್ಯಕ್ಷರು, ಸದಸ್ಯರಿಗೂ ಚುನಾವಣಾ ಜವಾಬ್ದಾರಿ ನೀಡಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular