HomeIndiaWPL: ಡೆಲ್ಲಿ ಮಣಿಸಿದ RCB ಚಾಂಪಿಯನ್: 'ಈ ಸಲ ಕಪ್ ನಮ್ದು'

WPL: ಡೆಲ್ಲಿ ಮಣಿಸಿದ RCB ಚಾಂಪಿಯನ್: ‘ಈ ಸಲ ಕಪ್ ನಮ್ದು’

ನವದೆಹಲಿ: ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಮಾಡಿ 8 ವಿಕೆಟ್ ಗಳಿಂದ ಮಣಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್ ಗಳಲ್ಲಿ 113 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ ಗಳಲ್ಲಿ ಎರಡು ವಿಕೆಟ್ ಗೆ 115 ರನ್ ಗಳಿಸಿ ಭರ್ಜರಿ 8 ವಿಕೆಟ್ ಗಳ ಜಯ ಸಾಧಿಸಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಸಿ.ಬಿ. ಮಹಿಳಾ ತಂಡ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್ ಪಡೆದರು, ಶ್ರೇಯಾಂಕಾ WPL ಫೈನಲ್‌ನಲ್ಲಿ ಮತ್ತು ಅವರ T20 ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular