ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನ ಭೈರತಿ ಉಗ್ರಾಣದ ಬಳಿ ಗಾಯತ್ರಿ ಅಸೊಸಿಯೇಟ್ ನಲ್ಲಿ ಈ ಅಗ್ನಿ ಅವಘಡ ನಡೆದಿದೆ. ಪರಿಣಾಮ ಕೋಟ್ಯಾಂತರ ಮೌಲ್ಯದ ವಸ್ತು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.