BREAKING NEWS: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷ; ಅಂಗಡಿಯೊಂದರ ಬಳಿ ಕಾಣಿಸಿಕೊಂಡ 8 ಜನ ನಕ್ಸಲರ ಗ್ಯಾಂಗ್

ಮಂಗಳೂರು: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ.

ಇಲ್ಲಿನ ಅಂಗಡಿಯೊಂದರ ಬಳಿ 8 ಜನ ನಕ್ಸಲರ ಗ್ಯಾಂಗ್ ಪ್ರತ್ಯಕ್ಷವಾಗಿದ್ದು, ಕಾಡಂಚಿನ ಅಂಗಡಿಗೆ ತೆರಳಿ ದಿನಸಿ ಖರೀದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಪೊಲೀಸರು ನಕ್ಸಲರಿಗಾಗಿ ಶೋಧ ನಡೆಸಿದ್ದಾರೆ.

ಕೊಡಗು ಹಾಗೂ ದಕ್ಷಿಣ ಕನ್ನಡ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಕೂಜಿಮಲೆ, ಕಲ್ಮಕಾರ್ ಗೆ ನಕ್ಸಲ್ ನಿಗ್ರಹ ಪಡೆ ಕೂಡ ಭೇಟಿ ನೀಡಿದೆ. 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿದ್ದು ಆತಂಕಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read