HomeKarnatakaಬೆಂಗಳೂರು : ಮೊಬೈಲ್ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಥಳಿಸಿದ ಗೂಂಡಾಗಳು |Watch Video

ಬೆಂಗಳೂರು : ಮೊಬೈಲ್ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಥಳಿಸಿದ ಗೂಂಡಾಗಳು |Watch Video

ಬೆಂಗಳೂರು ಬೆಂಗಳೂರಿನ ತರಗಪೇಟೆಯಲ್ಲಿ ಕಿಡಿಗೇಡಿಗಳು ಮೊಬೈಲ್ ಶಾಪ್ ನಡೆಸುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಬಿಡಿಭಾಗಗಳ ಅಂಗಡಿ ನಡೆಸುತ್ತಿದ್ದ ಮುಕೇಶ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದು, ದುಷ್ಕರ್ಮಿಗಳ ದಾಂಧಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖೇಶ್ ಪ್ರಕರಣ ದಾಖಲಿಸಿದ್ದಾರೆ.

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ ಉಗ್ರ ಹೋರಾಟ

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.

ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular