HomeKarnatakaನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ.

ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ನಿಂತದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ನಿಂತಿದ್ದ ಕಾರು ಏಕಾಏಕಿ ಹೊತ್ತಿ ಉರಿಯುತ್ತಿದ್ದಂತೆ ಜನರು ಆತಂಕಕ್ಕೀಡಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular