ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹಮಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಳಗಾವಿ, ಕೊಪ್ಪಳ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಂಭವ ಇದೆ.
ಇನ್ನು ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆ ಆಗಲಿದ್ದು, ಮೇ ಅಂತ್ಯದ ವೇಳೆಗೆ ಎಲ್ ನಿನೋ ಪ್ರಭಾವ ಕಡಿಮೆಯಾಗಿ ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ ಎನ್ನಲಾಗಿದೆ.